ಕರಾವಳಿಯಲ್ಲಿ ಭಾರಿ ಮಳೆ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Weather Report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. . ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು (Karnataka Weather) ಹವಾಮಾನ ಇಲಾಖೆ ತಿಳಿಸಿದೆ. . ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 kmph ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 25 ರಿಂದ 30ರ ವರೆಗೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 24, 25, 28, 29 & 30 ರಂದು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 24, 28, 29 & 30 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ (64.5mm – 115.4mm) ಮಳೆಯಾಗುವ ಸಾಧ್ಯತೆಯಿರುವ ಕಾರಣ IMD ಯಿಂದ ಯೆಲ್ಲೊ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅಂಗನವಾಡಿಯಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಟಿ. ಕೆ. ಸ್ವರೂಪ್ ಈ ರಜೆ ಆದೇಶ ಹೊರಡಿಸಿದ್ದಾರೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ರಾಯಚೂರು, ಹಾವೇರಿ, ಯಾದಗಿರಿ ಮತ್ತು ಕಲ್ಬುರ್ಗಿ ಹಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 kmph ವೇಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಗಂಟೆಗೆ 30 ರಿಂದ 40 kmph ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಮಳೆ ಬರ್ತಿದೆ ವರ್ಕ್ ಫ್ರಾಂ ಹೋಂ ಕೊಡಿ ಎಂದ ಉದ್ಯೋಗಿಗೆ ಕಂಪನಿ ಹೇಳಿದ್ದೇನು? ವೈರಲ್ ಆಯ್ತು ಪೋಸ್ಟ್
ರಾಜ್ಯದಲ್ಲಿ ಮಳೆ ಕೊರತೆ
ಜುಲೈ 22ರ ವರೆಗೆ ರಾಜ್ಯದಲ್ಲಿ 253 ಮಿ.ಮೀ. ಮಳೆ ದಾಖಲಾಗಿದ್ದು, ಸಾಮಾನ್ಯವಾಗಿ ಸಮಯದಲ್ಲಿ 392 ಮಿ.ಮೀ. ಮಳೆಯಾಗಬೇಕಿತ್ತು. ಒಟ್ಟಾರೆ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ. ಹವಾಮಾನ ತಜ್ಞರ ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ದುರ್ಬಲ ಗಾಳಿ, ಬಂಗಾಳ ಕೊಲ್ಲಿಯಲ್ಲಿ ಮುಂಗಾರು ವಾಯುಭಾರ ಕುಸಿತ ರೂಪುಗೊಳ್ಳದಿರುವುದು ರಾಜ್ಯದಲ್ಲಿ ಮಳೆ ಕೊರತೆಗೆ ಪ್ರಮುಖ ಕಾರಣವಾಗಿದೆ.