ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಯೆಲ್ಲೋ ಅಲರ್ಟ್; ಇಂದು ಬೆಳಗಾವಿ, ಧಾರವಾಡ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರಲಿದೆ.

ಇಂದು ಬೆಳಗಾವಿ, ಧಾರವಾಡ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Profile Prabhakara R Jun 4, 2025 6:00 AM

ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ (Karnataka Weather) ಯೆಲ್ಲೋ ಅಲರ್ಟ್‌ ನೀಡಿದೆ. ಜೂನ್‌ 4ರಂದು ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಸೇರಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಬುಧವಾರದಂದು ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರಲಿದೆ.

ಜೂನ್‌ 5ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನುಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಜೂನ್‌ 6ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಲಿದೆ.

ಈ ಸುದ್ದಿಯನ್ನೂ ಓದಿ | Health Tips: ಅತಿಯಾದ ಒತ್ತಡ, ಶಿಸ್ತಿಲ್ಲದ ಜೀವನಶೈಲಿ... ಇವುಗಳೇ ಪಾರ್ಶ್ವವಾಯುವಿಗೆ ಕಾರಣ

ಜೂನ್‌ 7ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.