ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ವರುಣನ ಅಬ್ಬರ; ಯಾವ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ?

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. . ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ವರುಣನ ಅಬ್ಬರ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 2, 2026 8:04 AM

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. . (Karnataka Weather) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಮಳೆಯ ವೇಳೆ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ.