ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ಇಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆ ಸಾಧ್ಯತೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 27°C ಮತ್ತು 20°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಇಂದು ಕೂಡ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 27°C ಮತ್ತು 20°C ಇರುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಗಂಟಲು ಕೆರೆತ, ಕಿರಿಕಿರಿ ಸಮಸ್ಯೆಯೇ? ಇಲ್ಲಿದೆ ನೋಡಿ ಮನೆಯಲ್ಲೇ ತಯಾರಿಸಿಬಹುದಾದ ಸುಲಭ ಮನೆಮದ್ದುಗಳು

ನ.26ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.