Karnataka Weather: ರಾಜ್ಯದ ಏಳು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್; ಗುಡುಗುಸಹಿತ ಮಳೆ ಸಾಧ್ಯತೆ!
Weather Report: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಇಂದು (ಜು.9) ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather) ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Health Tips: ಶುಂಠಿ ಚಹಾ ಹೆಚ್ಚು ಕುಡಿಯುತ್ತೀರಾ? ಮಿತಿಮೀರಿದರೆ ಈ ಆರೋಗ್ಯ ಸಮಸ್ಯೆ ಕಾಡಬಹುದು!
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.