ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಂದಿನ ಎರಡು ದಿನ ಭಾರೀ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. (Karnataka Weather) ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇವುಗಳಲ್ಲಿ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಮತ್ತು ರಾಯಚೂರಿನಲ್ಲೂ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 50 ರಿಂದ 60 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಮೇ 25ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲಿ ಸಾಧಾರಣದಿಂದ ಕೂಡಿದ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್‌ನಲ್ಲಿ ಬಿರುಗಾಳಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

Vishakha Bhat Heggar

View all posts by this author