ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ಇಂದು 4 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ

Karnataka Weather Report: ಶುಕ್ರವಾರ (ಜೂನ್‌ 19) ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಟ್‌ಜಿಪಿಟಿ ರಚಿತ ಚಿತ್ರ

ಬೆಂಗಳೂರು, ಜೂ. 19: ಎಲ್‌ ನಿನೊ (El Nino) ಪರಿಣಾಮದಿಂದ ಮುಂಗಾರು ದುರ್ಬಲಗೊಂಡಿದ್ದು, ಕೃಷಿಕರ ಆತಂಕ ಮುಂದುವರಿದಿದೆ. ಶುಕ್ರವಾರ (ಜೂನ್‌ 19) ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ (Karnataka Weather). ಅದಾಗ್ಯೂ ರಾಯಚೂರು, ಕಲಬುರಗಿ, ಮೈಸೂರು-ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ವರ್ಷಧಾರೆಯಾಗಲಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 22°C ಹಾಗೂ 30°C ಇರಲಿದೆ.

ಮುಂದಿನ ದಿನಗಳಲ್ಲಿ ಹವಾಮಾನ ಹೇಗಿರಲಿದೆ?

ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಶನಿವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಗುಡುಗು ಸಾಧಾರಣ ವರ್ಷಧಾರೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಕೆಲವೆಡೆ ಭಾರಿ ಮಳೆ: ಯೆಲ್ಲೋ ಅಲರ್ಟ್

ಎಲ್‌ ನಿನೊ ಪರಿಣಾಮ ತೀವ್ರ: ಎಚ್ಚರಿಕೆ

ಈ ಮಧ್ಯೆ, ʼʼಮುಂಗಾರು ಬೆಳೆ ಋತುವಿನಲ್ಲಿ ಎಲ್ ನಿನೊ ಪರಿಣಾಮ ತೀವ್ರವಾಗಿರುವ ಸಾಧ್ಯತೆಗಳಿವೆʼʼ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. 2026ರ ಮುಂಗಾರು ಹಂಗಾಮಿನ ಬೆಳೆಗಳ ಸಿದ್ಧತೆಗಳ ಕುರಿತು ಸಾಪ್ತಾಹಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ ಕೊರತೆ ಇರುವ ಜಿಲ್ಲೆಗಳಲ್ಲಿ ಮುಂಗಡ ತುರ್ತು ಯೋಜನೆಯ ಅಗತ್ಯವನ್ನು ಒತ್ತಿ ಹೇಳಿದ್ದು, ಹತ್ತಿ ಮತ್ತು ದ್ವಿದಳ ಧಾನ್ಯಗಳ ಬೆಳೆಯ ವಿಸ್ತೀರ್ಣ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ರೈತರಿಗೆ ಆಯ್ಕೆಗಳು, ಸಲಹೆ ಮತ್ತು ಸಹಾಯವನ್ನು ತ್ವರಿತವಾಗಿ ಒದಗಿಸಲು ಸಾಧ್ಯವಾಗುವಂತೆ, ದುರ್ಬಲ ಜಿಲ್ಲೆಗಳನ್ನು ಸ್ಪಷ್ಟವಾಗಿ ಗುರುತಿಸಲು ಮತ್ತು ಬೆಳೆವಾರು ತುರ್ತು ಯೋಜನೆಗಳನ್ನು ಮುಂಚಿತವಾಗಿ ಸಿದ್ದಪಡಿಸಲು ಚೌಹಾಣ್ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದ್ದಾರೆ.

ʼʼಪ್ರತಿ ದುರ್ಬಲ ಜಿಲ್ಲೆಗೆ ಪ್ರತ್ಯೇಕ ಮತ್ತು ಪ್ರಾಯೋಗಿಕ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಬೇಕು. ನೀರಿನ ಸಂರಕ್ಷಣೆ, ತೇವಾಂಶ ನಿರ್ವಹಣೆ, ಅಂತರ ಬೆಳೆ ಮತ್ತು ಪರ್ಯಾಯ ಬೆಳೆ ಮಾದರಿಗಳಿಗೆ ವಿಶೇಷ ಗಮನ ನೀಡಬೇಕುʼʼ ಎಂದು ಅವರು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author