ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ಕರಾವಳಿಯಲ್ಲಿ ಸೆಪ್ಟೆಂಬರ್‌ 1ರವರಗೆ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Rains: ಕರಾವಳಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸಲಿದೆ. ಗುರುವಾರ ವಿವಿಧ ಕಡೆಗಳಲ್ಲಿ ಅಬ್ಬರಿಸಿದ್ದ ವರ್ಷಧಾರೆ ಶುಕ್ರವಾರವೂ ಪ್ರತಾಪ ತೋರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 1ರವರೆಗೆ ವ್ಯಾಪಕ ಮಳೆಯಾಗಲಿದೆಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಗುರುವಾರ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರವೂ (ಆಗಸ್ಟ್‌ 29) ತನ್ನ ಪ್ರತಾಪ ತೋರಲಿದೆ (Karnataka weather). ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 28°C ಇರಲಿದೆ.

ಕರಾವಳಿಯಲ್ಲಿ ಸೆ. 1ರವರಗೆ ವ್ಯಾಪಕ ಮಳೆ

ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ, ಒಡಿಶಾದ ಕರಾವಳಿಯ ಹತ್ತಿರ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 1ರವರೆಗೆ ವ್ಯಾಪಕ ಮಳೆಯಾಗಲಿದೆ.

ಈ ಸುದ್ದಿಯನ್ನೂ ಓದಿ: Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಯೆಲ್ಲೋ ಅಲರ್ಟ್‌

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್‌ 30ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆಯೂ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಹೇಗಿರಲಿದೆ?

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಸೂಚನೆ

ಆಗಸ್ಟ್‌ 29ರವರೆಗೆ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ.ವರೆಗಿನ ವೇದಲ್ಲಿ ಗಾಳಿ ಬೀಸಲಿದೆ. ಜತೆಗೆ ಬಿರುಗಾಳಿ ಏಳುವ ಸಾಧ್ಯತೆಯೂ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಸೂಚಿಸಲಾಗಿದೆ.

ಆಗಸ್ಟ್‌ 30ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್‌ 31 ಮತ್ತು ಸೆಪ್ಟೆಂಬರ್ 1ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.