ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಹಲವೆಡೆ ಮಾರ್ಚ್‌ 29 ರಿಂದ 4 ದಿನಗಳು ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೋರು ಮಳೆಯಾಗಲಿದ್ದು, 14 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಮಾರ್ಚ್‌ 29 ರಿಂದ 4 ದಿನಗಳು ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೋರು ಮಳೆಯಾಗಲಿದ್ದು, 14 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 4ರ ಮಳೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಮಳೆಯಾಗಲಿದೆ. ಶನಿವಾರ ಸಂಜೆ ಬೆಂಗಳೂರಿನ ಕೆಲವಡೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ. 50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ, ಗುಡುಗು ಮತ್ತು ಮಿಂಚಿನ ಆರ್ಭಟ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಹಲವೆಡೆ ಇಂದಿನಿಂದ ಮಳೆಯಾಗಲಿದೆ. ಅರಬ್ಬಿ ಸಮುದ್ರದ ಸುಳಿಗಾಳಿಯಿಂದಾಗಿ ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಏಪ್ರಿಲ್ 2 ರಿಂದ ಏಪ್ರಿಲ್ 4 ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯ ಮುನ್ಸೂಚನೆ ಇದೆ.

Vishakha Bhat Heggar

View all posts by this author