ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದ 12 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ ಹಲವೆಡೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಸೈಕ್ಲೋನಿಕ್ ಪರಿಚಲನೆಯ ತೀವ್ರತೆಯಿಂದಾಗಿ ರಾಜ್ಯದಲ್ಲಿ ಅಕ್ಟೋಬರ್ ಮೊದಲ ವಾರದವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಸೈಕ್ಲೋನಿಕ್ ಪರಿಚಲನೆಯ ತೀವ್ರತೆಯಿಂದಾಗಿ ರಾಜ್ಯದಲ್ಲಿ ಅಕ್ಟೋಬರ್ ಮೊದಲ ವಾರದವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 12 ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ಮೈಸೂರು ಭಾಗದಲ್ಲಿ ಮಧ್ಯಾಹ್ನದ ನಂತರ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಸಂಜೆ ವೇಳೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶದಲ್ಲಿ ಅಬ್ಬರಿಸಿದ ಮಳೆ-ಗಾಳಿ: ಒಂದೇ ತಿಂಗಳಲ್ಲಿ 157 ಮಂದಿ ಸಾವು, 260 ರಸ್ತೆ ಸಂಪರ್ಕ ಕಡಿತ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Vishakha Bhat Heggar

View all posts by this author