ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್ ಅಲರ್ಟ್ ಘೋಷಣೆ
Karnataka Weather: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ (Karnataka Weather) ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 18 ಹಾಗೂ 19 ಭಾನುವಾರ, ಸೋಮವಾರದಂದು ಕರಾವಳಿಯ ಮೂರೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಭಾನುವಾರ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೂ ಯೆಲ್ಲೋ ಅಲರ್ಟ್ ಇದ್ದು, ಉಳಿದ ಜಿಲ್ಲೆಗಳಲ್ಲಿ ಭಾನುವಾರದಿಂದ ಹಗುರ ಮಳೆ ಮಾತ್ರ ಮುನ್ಸೂಚನೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದ್ದು, ಗಾಳಿಯ ಅಬ್ಬರ (Gusty wind) ಇರಲಿದೆ.
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರಿನ ಹಲವೆಡೆ ತಂಪೆರೆದಿದ್ದ ವರುಣ ಇಂದೂ ಸಹ ಕೆಲ ಕಾಲ ಮಳೆ ಸುರಿಸಲಿದ್ದಾನೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ಹೆಚ್ಚು ಬಿಸಿಲಿನಿಂದ ಕೂಡಿರಲಿದ್ದು, ಸಂಜೆಯ ವೇಳೆಗೆ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಆದರೆ ಜುಲೈ 18 ಮತ್ತು 19ರಂದು ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 21°C ಗೆ ತಲುಪಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ನಷ್ಟು ಮುಂದುವರೆಯಲಿದೆ. ಸಂತಸದ ವಿಚಾರವೆಂದರೆ ಜುಲೈ 18ರ ನಂತರ ಬೆಂಗಳೂರಲ್ಲಿ ಮುಂದಿನ 3 ದಿನಗಳ ಕಾಲ ಸಾಧಾರಣ ಮಳೆ ಆಗಲಿದೆ.