Karnataka Weather: ಯೆಲ್ಲೋ ಅಲರ್ಟ್; ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ
Karnataka Weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಏ.27ರವರೆಗೆ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಏ.25ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 26ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಹಾವೇರಿ ಜಿಲ್ಲೆ ಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗಾಳಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) April 24, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. pic.twitter.com/sn3gJCZwIE
ಏಪ್ರಿಲ್ 27ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಹಾವೇರಿ ಹಾಗೂ ದಕ್ಷಿಣ ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಏಪ್ರಿಲ್ 28ರಂದು ಕರಾವಳಿಯ ಉತ್ತರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯದ ಆರೈಕೆ ಹೇಗೆ?
ಏಪ್ರಿಲ್ 29 ಮತ್ತು 30ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.