ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಮನೆಯಿಂದ ಹೊರಗಿಳಿಯುವಾಗ ಛತ್ರಿ ಜತೆಗಿರಲಿ; ಇಂದೂ ಸುರಿಯಲಿದೆ ವರ್ಷಧಾರೆ

Weather Forecast: ಶುಕ್ರವಾರ (ಏ. 4) ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಸಾಂದರ್ಭಿಕ ಚಿತ್ರ.

Profile Ramesh B Apr 4, 2025 6:00 AM

ಬೆಂಗಳೂರು: ಗುರುವಾರ (ಏ. 3) ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಬಿಸಿಲಿನ ಧಗೆಗೆ ಬಸವಳಿದಿದ್ದ ಜನತೆ ಕೊಂಚ ನಿರಾಳರಾಗಿದ್ದಾರೆ. ಹಾಗೆಯೇ ಮುಂದಿನ 4 ದಿನ ರಾಜ್ಯದೆಲ್ಲೆಡೆ ವರುಣ (Weather Forecast) ಆರ್ಭಟಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ (ಏ. 4) ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-4- ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29° ಸಿ ಮತ್ತು 20° ಸಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆ/ಗುಡುಗು ಸಹಿತ ಮಳೆ ಸುರಿಯಲಿದೆ. ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ತಂಪೆರೆದ ಬೇಸಗೆ ಮಳೆ; ಹಲವು ಕಡೆ ಕೆರೆಯಂತಾದ ರಸ್ತೆ

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ ಮತ್ತು ಬೀದರ್‌ ಜಿಲ್ಲೆಗಳ ಕೆಲವೆಡೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆ/ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

rain

ಗುರುವಾರ ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಧರೆಗುರುಳಿದ ಮರ.

ಏ. 5ರಂದು ಮಳೆ ಬರುತ್ತಾ?

ಇನ್ನು ಏ. 5ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು ಮತ್ತು ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ.

ಮುಂದಿನ 3 ದಿನಗಳವರೆಗೆ ರಾಜ್ಯದ ಗರಿಷ್ಠ ತಾಪಮಾನದಲ್ಲಿ 3-4 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗಲಿದೆ. ಮೀನುಗಾರರಿಗೆ ಯಾವುದೆ ಮುನ್ನಚ್ಚರಿಕೆ ನೀಡಲಾಗಿಲ್ಲ.