Karnataka Weather: ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ ಅಬ್ಬರ; ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Karnataka Rains: ಇಂದು (ಶುಕ್ರವಾರ) ಕರಾವಳಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾಂಧರ್ಬಿಕ ಚಿತ್ರ.

ಬೆಂಗಳೂರು: ಗುರುವಾರ ಕರಾವಳಿ ಸೇರಿ ವಿವಿಧ ಕಡೆಗಳಲ್ಲಿ ಅಬ್ಬರಿಸಿದ ಮಳೆ ಶುಕ್ರವಾರವೂ ಬಿರುಸಾಗಿ ಸುರಿಯಲಿದೆ (Karnataka Weather). ಇಂದು ಕರಾವಳಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಭಾರಿ ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸಲಿದೆ (Karnataka Rains). ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C, 30°C ಇರಲಿದೆ. ಹೀಗಾಗಿ ಸಾವರ್ಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭಾರಿ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಈ ಸುದ್ದಿಯನ್ನೂ ಓದಿ: Actor Darshan: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಮೇಲ್ಮನವಿ ವಿಚಾರಣೆ ಜುಲೈ 23ಕ್ಕೆ ಮುಂದೂಡಿಕೆ
ಉತ್ತರ ಒಳನಾಡು ಜಿಲ್ಲೆಗಳಲಲಿ ಸಾಧಾರಣ ಮಳೆ
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲರು ಹಲವೆಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮೀನುಗಾರರಿಗೆ ಎಚ್ಚರಿಕೆ
ಜು. 20ರ ತನಕ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಂದೆ ಹವಾಮಾನ ಇಲಾಖೆ ಸೂಚಿಸಿದೆ.
ಮಳೆ ಮುಂದುವರಿಯಲಿದೆ
ಜು. 22ರ ತನಕ ಮಳೆಯ ಅಬ್ಬರ ಹೀಗೆ ಮುಂದುವರಿಯುವ ಸಾಧ್ಯತೆ ಇದೆ. ಜು. 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜು. 20ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ.
ಜು. 21 ಮತ್ತು 22ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನದಿ ಮತ್ತು ಸಮುದ್ರ ತೀರದ ಜನರು ಸಾಕಷ್ಟು ಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.