ಬೆಂಗಳೂರು: ರಾಜ್ಯದಲ್ಲಿ ಮಳೆಯ ವಾತಾವರಣ ಕೊಂಚ ತಗ್ಗಿದೆ. ಇಂದು ಹಾಗೂ ನಾಳೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ (Karnataka Weather) ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ಸಹ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬೆಳಗಿನ ಜಾವ ಇಬ್ಬನಿ ಮತ್ತು ತಂಪಾದ ಗಾಳಿ ಇರಲಿದ್ದು, ಮಧ್ಯಾಹ್ನದ ವೇಳೆಗೆ ಒಣ ಹವಾಮಾನ ಹಾಗೂ ಸಂಜೆ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲ್ಬುರ್ಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಬಿಸಿಲ ವಾತಾವರಣ ಮುಂದುವರಿಯಲಿದೆ.
ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಬಹುದು ಎನ್ನಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಪ್ರಕಾರ, ಬೆಂಗಳೂರು ಸೇರಿದಂತೆ ಕರ್ನಾಟಕದ ಹೆಚ್ಚಿನ ನಗರಗಳಲ್ಲಿ ಗಾಳಿಯ ಗುಣಮಟ್ಟ ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೆಂಗಳೂರು ಸರಾಸರಿ AQI 65-85 ರಷ್ಟಿದ್ದರೆ, ಕರಾವಳಿ, ಮಲೆನಾಡು ಹಾಗೂ ಮೈಸೂರಿನಲ್ಲಿ ಅತ್ಯುತ್ತಮವಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯ ಕೊಂಚ ಹೆಚ್ಚಿದೆ. ಬೆಂಗಳೂರಿನ ಪೀಣ್ಯ, ಮೈಸೂರು ರಸ್ತೆ ಹಾಗೂ ಸಿಲ್ಕ್ ಬೋರ್ಡ್‌ನಂತಹ ಹೆಚ್ಚು ವಾಹನ ಸಂಚಾರವಿರುವ ಪ್ರದೇಶಗಳಲ್ಲಿ ಮಾಲಿನ್ಯ ಪ್ರಮಾಣ ಕೊಂಚ ಹೆಚ್ಚಾಗಿದೆ.