ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು; ಮಾ.11ರಿಂದ ರಾಜ್ಯದಲ್ಲಿ ಭಾರಿ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ ಎಂಧು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು

Profile Prabhakara R Mar 9, 2025 5:38 PM

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಏರುತ್ತಿದ್ದು, ರಾಜ್ಯಾದ್ಯಂತ ಶನಿವಾರ ಒಣ ಹವೆಯ ವಾತಾವರಣವಿತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 39.0 ಡಿ.ಸೆ ದಾಖಲಾಗಿದ್ದು, ದಾವಣಗೆರೆಯಲ್ಲಿ ಅತೀ ಕಡಿಮೆ ಉಷ್ಣಾಂಶ 14.5 ಡಿ.ಸೆ. ದಾಖಲಾಗಿದೆ. ಇನ್ನು ಮಾರ್ಚ್‌ 10 ರಂದು ಕೂಡ ರಾಜ್ಯಾದ್ಯಂತ ಒಣ ಹವೆ (Karnataka Weather) ಇರುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-3° C ಯಷ್ಟು ಹೆಚ್ಚಳವಾಗಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.

ಇನ್ನು ಮಾ.11ರಂದು ದಕ್ಷಿಣ ಒಳ ಕರ್ನಾಟಕದ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪ್ರತ್ಯೇಕವಾದ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವಾಮಾನ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಾ.12ರಂದು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ದಕ್ಷಿಣ ಒಳನಾಡಿನ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಗಳು ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪ್ರತ್ಯೇಕವಾದ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಣ ಹವಾಮಾನವು ರಾಜ್ಯದ ಉಳಿದ ಭಾಗಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Karnataka weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಬೇಸಿಗೆ ಮಳೆ!

ಅದೇ ರೀತಿ ಮಾ.13ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳು ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಣ ಹವಾಮಾನವು ರಾಜ್ಯದ ಉಳಿದ ಭಾಗಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಅನಂತರ ಮಾ. 14 ಮತ್ತು 15ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.