ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಕೆಲವು ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ (Karnataka Weather) ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತ ನಗರದಲ್ಲಿ ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ಇರಲಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶ ಮತ್ತು ಆರ್ದ್ರತೆ ಹೆಚ್ಚಿರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುಪಾಲು ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇಂದೂ ಅಬ್ಬರಿಸಲಿದ್ದಾನೆ ವರುಣ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ಮಲೆನಾಡು, ಕರಾವಳಿ (ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ), ಮಧ್ಯ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಮುನ್ನೆಚ್ಚರಿಕೆ ಮುಂದುವರಿದಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಮತ್ತು ಬಿರುಗಾಳಿ ಮುಂದುವರಿಯಲಿದೆ.ಮೇ 15ರ ಸುಮಾರಿಗೆ ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನ ತಲುಪಲಿದೆ. ಬಳಿಕ ಕೇರಳಕ್ಕೆ ಮುಂಗಾರು ಆಗಮಿಸಲಿದ್ದು, ನಂತರ ಕರ್ನಾಟಕಕ್ಕೆ ಪ್ರವೇಶ ಮಾಡಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರಿನ ನಿರೀಕ್ಷೆ ಮಾಡಲಾಗಿದೆ.

Vishakha Bhat Heggar

View all posts by this author