ಬೆಂಗಳೂರು, ಜು. 10: ರಾಜ್ಯದ ಕೆಲವೆಡೆ ಮುಂಗಾರು ನಿಧಾನವಾಗಿ ಚುರುಕುಗೊಂಡಿದೆ. ಶುಕ್ರವಾರವೂ (ಜುಲೈ 10) ಕರಾವಳಿ ಸೇರಿ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ (Karnataka Weather). ಮುಂದಿನ 24 ಗಂಟೆಯವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 29ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲೂ ಜೋರಾಗಿ ವರ್ಷಧಾರೆಯಾಗಲಿದೆ. ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಆಡಳಿತದ ನಿರ್ಲಕ್ಷ್ಯಕ್ಕೆ ಕುಸಿದ ಕುಮದ್ವತಿ ನದಿ ದಂಡೆ
ಮೀನುಗಾರರಿಗೆ ಎಚ್ಚರಿಕೆ
ಇನ್ನು ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಸೂಚಿಸಲಾಗಿದೆ. ಕರಾವಳಿಯಲ್ಲಿ ಎತ್ತರದ ಅಲೆಗಳು ಮೂಡುವ ಸಾಧ್ಯತೆ ಇರುವುದರಿಂದ ಸಣ್ಣ ಹಡಗುಗಳು ಓಡಾಡುವಂತಿಲ್ಲ, ಸಮುದ್ರ ತೀರದ ಸಮೀಪ ಮನರಂಜನಾ ಚಟುವಟಿಕೆ ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ.
ಜುಲೈ 11ರ ಹವಾಮಾನ ಹೇಗಿರಲಿದೆ?
ಜುಲೈ 11ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಬಳ್ಳಾರಿ, ಬೆಂಗಳೂರು (ಗ್ರಾಮೀಣ, ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಹಗುರ, ಮಧ್ಯಮ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ನದಿಗಳು ಉಕ್ಕಿ ಹರಿಯುವ ಸಾಧ್ಯತೆ ಇರುವುದರಿಂದ ತೀರದಿಂದ ಅಂತರ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.