ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರಾವಳಿಯಲ್ಲಿ ಇನ್ನೂ ಆರು ದಿನ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಮುಂದಿನ ಒಂದು ವಾರ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.

ಕರಾವಳಿಯಲ್ಲಿ ಇನ್ನೂ ಆರು ದಿನ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 1, 2026 7:08 AM

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಮುಂದಿನ ಒಂದು ವಾರ ಕಾಲ (Karnataka Weather) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಕರಾವಳಿಯಲ್ಲಿ ಜುಲೈ 1 ರಿಂದ 3 ರವರೆಗೆ ಅತಿ ಭಾರಿ ಮಲೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹೊರತು ಪಡಿಸಿ ಇತರ ಭಾಗಗಳಲ್ಲೂ ಮುಂಗಾರು ಚುರುಕಾಗಿದೆ. ಉತ್ತರ ಕರ್ನಾಟಕದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 1,2,3, 4 ಹಾಗೂ ಜುಲೈ 5 ರಂದು ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದ್ದು, ಧಾರವಾಡ, ಗದಗ, ಹಾವೇರಿ, ಹಾಸನ, ಚಿಕ್ಕಮಗಳೂರುಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಉಳಿದೆಡೆ ಒಣಹವೆ ಅಥವಾ ಹಗುರ ಮಳೆ ಮಾತ್ರ ಮುಂದುವರಿಯಲಿದೆ.

ಒಳನಾಡು ಭಾಗದಲ್ಲಿ ಮಳೆ ಕೊರತೆ ಉಂಟಾಗಿದೆ. ಇಲಾಖೆಯ ಅಂಕಿಅಂಶಗಳ ಪ್ರಕಾರ, ಜೂನ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲಈ ತಿಂಗಳಲ್ಲಿ ರಾಜ್ಯದಲ್ಲಿ ಸುಮಾರು 43.% ರಷ್ಟು ಮಳೆ ಕೊರತೆ ಉಂಟಾಗಿದೆ. ವಾಡಿಕೆಯಂತೆ ಜೂನ್‌ನಲ್ಲಿ 119 ಮೀಮೀ ಮಳೆಯಾಗಬೇಕಿತ್ತು. ಆದರೆ, ಮಳೆಯಾಗಿರುವುದು 110 ಮಿಮೀ ಮಾತ್ರ. ಕರಾವಳಿಯಲ್ಲಿ 46%, ಉತ್ತರ ಒಳನಾಡಿನಲ್ಲಿ 24%, ದಕ್ಷಿಣ ಒಳನಾಡಿನಲ್ಲಿ 50% ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ದಕ್ಷಿಣ ಒಳನಾಡು ಪ್ರದೇಶವೇ ಅತಿ ಹೆಚ್ಚು ಮಳೆ ಕೊರತೆ ಉಂಟಾಗಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.