ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ. ಉಳಿದೆಡೆ ಒಣ ಹವಾಮಾನ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಜೂನ್ 29 ರ ಬಳಿಕ ಮುಂಗಾರು ಚುರುಕಾಗಲಿದ್ದು, ಕರಾವಳಿ ಹಾಗೂ ಪಶ್ವಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಜೋರಾಗಲಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ (Karnataka Weather) ಅಬ್ಬರಿಸುತ್ತಿದೆ. ಉಳಿದೆಡೆ ಒಣ ಹವಾಮಾನ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಜೂನ್ 29 ರ ಬಳಿಕ ಮುಂಗಾರು ಚುರುಕಾಗಲಿದ್ದು, ಕರಾವಳಿ ಹಾಗೂ ಪಶ್ವಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಜೋರಾಗಲಿದೆ. ಜೂನ್​​ 26ರಿಂದ ಜುಲೈ ಆರಂಭದವರೆಗೂ ಕರಾವಳಿಯಲ್ಲಿ ಉತ್ತಮ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಸಾಧಾರಣ ವರ್ಷಧಾರೆ ನಿರೀಕ್ಷಿಸಲಾಗಿದೆ. ಹಾಗೆಯೇ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗಲಿದೆ.

ರಾಜ್ಯದಲ್ಲಿ ಜೂನ್ 29 ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜು. 2ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 30 ರಂದು ಯಾದಗಿರಿ ಜಿಲ್ಲೆಯಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಇನ್ನು, ದಕ್ಷಿಣ ಒಳನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದ್ದು, 30-40 ಕಿಮೀ ವೇಗದಲ್ಲಿ ಗಾಳಿಯ ವೇಗ ಇರಲಿದ್ದು, ಹಗುರ ಮಳೆಯ ಮುನ್ಸೂಚನೆ ಇದೆ. 20 ಡಿಗ್ರಿ ಸೆ, ಹಾಗೂ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಹಾಗೂ ಗರಿಷ್ಠ ತಾಪಮಾನವಿದೆ.

Vishakha Bhat Heggar

View all posts by this author