ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Weather July 2nd 2026: ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಕರಾವಳಿಗೆ ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

Karnataka Weather: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಗುರುವಾರವೂ (ಜುಲೈ 2) ವರ್ಷಧಾರೆಯಾಗಲಿದೆ. ಮುಂದಿನ ಒಂದು ವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗುರುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಚಾಟ್‌ಜಿಪಿಟಿ ರಚಿತ ಚಿತ್ರ -

Ramesh Ballamoole
Ramesh Ballamoole Jul 2, 2026 6:00 AM

ಬೆಂಗಳೂರು, ಜು. 1: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಗುರುವಾರವೂ (ಜುಲೈ 2) ವರ್ಷಧಾರೆಯಾಗಲಿದೆ (Karnataka Weather). ಮುಂದಿನ ಒಂದು ವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಕರಾವಳಿ ಕರ್ನಾಟಕಕ್ಕೆ ಗುರುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಸಾರಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಹಗುರದಿಂದ ಮಧ್ಯಮ ಮಳೆಯಾಗಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21°C ಹಾಗೂ 27°C ಇರಲಿದೆ.

ಕರಾವಳಿಯಲ್ಲಿ ಇನ್ನೂ ಆರು ದಿನ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿ ಕರ್ನಾಟಕದಲ್ಲಿ ಗಾಳಿ ಸಹಿತ ಭಾರಿ ಮಳೆ

ಗುರುವಾರ ಮುಂಗಾರು ಅಬ್ಬರಿಸಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಭಾಗದಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇದೇ ಕಾರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್‌ ಆದೇಶ ಹೊರಡಿಸಿದ್ದಾರೆ. ಇನ್ನು ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಂಟೆಗೆ 60 ಕಿ.ಮೀ. ವೇಗದವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಉಳಿದೆಡೆ ಹೇಗಿರಲಿದೆ?

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೂಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆಯಾಗಲಿದೆ. ಬಾಗಲಕೋಟೆ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಸುರಿಯಲಿದೆ.

ಜುಲೈ 3ರ ಹವಾಮಾನ

ಜುಲೈ 3ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಜೋರಾಗಿ ವರ್ಷಧಾರೆಯಾಗು ಸಾಧ್ಯತೆ ಇದೆ. ಬೆಂಗಳೂರು (ನಗರ, ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲೂ ಹಗುರ ಮಳೆಗೆ ಸಾಧ್ಯತೆ ಇದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.