ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಇದೇ ರೀತಿ ನಾಳೆಯೂ (ಮೇ 27) ಮಳೆ ಅಬ್ಬರ (Karnataka Weather) ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ (Orange alert) ನೀಡಲಾಗಿದೆ.
ನಾಳೆ ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 28ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿಲಾಗಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆ ಹೊರತುಪಡಿಸಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.
ಮೇ 29ರಂದು ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 30ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.