ಇಂದೂ ಅಬ್ಬರಿಸಲಿದ್ದಾನೆ ವರುಣ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಸಂಗ್ರಹ ಚಿತ್ರ -
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ (Karnataka Weather) ಮಳೆಯಾಗುವ ಮುನ್ಸೂಚನೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ನಗರದಲ್ಲಿ ಗರಿಷ್ಠ ತಾಪಮಾನ 36°C ಮತ್ತು ಕನಿಷ್ಠ ತಾಪಮಾನ 24°C ದಾಖಲಾಗುವ ನಿರೀಕ್ಷೆಯಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾರ್ಭಟವಿದ್ದು, ಕೆಲವೆಡೆ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರೇ ಗಮನಿಸಿ; ಮಳೆ ಸಂಬಂಧಿತ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭಿಸಿದ ಬೆಸ್ಕಾಂ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಲ್ಲಿ ಏಪ್ರಿಲ್‌ನಲ್ಲಿ ದಾಖಲೆಯ ಅತ್ಯಂತ ಮಳೆಯ ದಿನವನ್ನು ಕಂಡಿದೆ. ಬುಧವಾರ ಸಂಜೆ ನಗರದಲ್ಲಿ ಗುಡುಗು ಸಹಿತ ತೀವ್ರವಾದ ಮಳೆಯು ಒಂದು ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ದಾಖಲೆಯ ಮಳೆಯು 11 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗಿದೆ. 100ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಅನೇಕ ವಿದ್ಯುತ್ ಸಮಸ್ಯೆಗಳು ಕಂಡುಬಂದಿದ್ದವು.