ಬೆಂಗಳೂರು, 12: ಎಲ್ ನೀನೊ (El Nino) ಪರಿಣಾಮದಿಂದ ದೇಶಾದ್ಯಂತ ಬರದ ಛಾಯೆ ಎದುರಾಗಿದ್ದು, ಮುಂಗಾರು ಮಳೆ ಅಕ್ಟೋಬರ್ 15ರಿಂದ 21ರೊಳಗೆ ಸಂಪೂರ್ಣವಾಗಿ ನಿರ್ಗಮಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಇನ್ನು ರಾಜ್ಯದಲ್ಲಿಯೂ ಮುಂಗಾರು ದುರ್ಬಲವಾಗಿದ್ದು, ಮಳೆ ಬಹುತೇಕ ಮಾಯವಾಗಿದೆ (Karnataka Weather). ಸೋಮವಾರವೂ (ಅಕ್ಟೋಬರ್ 12) ರಾಜ್ಯಾದ್ಯಂತ ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರು ಸೇರಿ ಎಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿ ತಿಳಿಸಿದೆ.
ಮುಂದಿನ 24 ಗಂಟೆವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 30°C ಇರಲಿದೆ.
ಇಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣದೊಂದಿಗೆ ಬಿಸಿಲಿನ ಝಳ ಹೆಚ್ಚಿರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಹೆಚ್ಚಿರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಎಲ್ಲೂ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ.
ರಾಜ್ಯಕ್ಕೆ ಮತ್ತೆ CWMA ಶಾಕ್: ತಮಿಳುನಾಡಿಗೆ 15 ದಿನಗಳವರೆಗೆ 3,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಸೂಚನೆ
ಮುಂದಿನ ದಿನಗಳಲ್ಲಿ ಮಳೆ ಆಗುತ್ತಾ?
ಐಎಂಡಿ ಪ್ರಕಾರ ಮುಂದಿನ 3 ದಿನ ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ. ಅಕ್ಟೋಬರ್ 15ರಂದು ಕೆಲೆವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲೂ ಸಾಧಾರಣ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ತುಂತುರು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ವರ್ಷಧಾರೆಯಾಗುವ ಸಾಧ್ಯತೆ ಇದೆ.
ದಿಲ್ಲಿಯಲ್ಲಿ ಭಾರಿ ಮಳೆ
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಗ್ಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ನೋಯ್ಡಾ, ಗುರುಗ್ರಾಮ ಮತ್ತು ಗಾಜಿಯಾಬಾದ್‌ನಲ್ಲೂ ಉತ್ತಮ ಮಳೆ ಸುರಿದಿದೆ. ಇನ್ನು ಐಎಂಡಿ ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.