ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಹೆಚ್ಚಿದ ಬಿಸಿಲಿನ ತಾಪ; ಕೆಲವು ಜಿಲ್ಲೆಗಳಲ್ಲಿ ಮಳೆ ಸೂಚನೆ

Karnataka Weather: ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಏರುತ್ತಲೇ. ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಏರುತ್ತಲೇ. ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು (Karnataka Weather) ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನು ಬಿಸಿಲಿನ ನಡುವೆಯೂ ಹಲವೆಡೆ ಹಗಲಿನಲ್ಲಿ ಶೇಕಡಾ 10% ರಷ್ಟು ಮತ್ತು ರಾತ್ರಿಯ ವೇಳೆಗೆ ಶೇಕಡಾ 15% ರಷ್ಟು ಮಳೆಯಾಗುವ ಅತ್ಯಲ್ಪ ಸಂಭವವಿದ್ದು, ರಾತ್ರಿಯ ಸಮಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗಾಳಿಯು ದಕ್ಷಿಣ ದಿಕ್ಕಿನಿಂದ ಗಂಟೆಗೆ 7 ಮೈಲಿ ವೇಗದಲ್ಲಿ ಬೀಸಲಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 22 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಂತೆಯೇ ದಕ್ಷಿಣ ಒಳನಾಡಿನಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ದೇಶಾದ್ಯಂತ ತೀವ್ರ ಬಿಸಿಗಾಳಿ ಎಚ್ಚರಿಕೆ: ಸುರಕ್ಷತಾ ಕ್ರಮಕ್ಕೆ ವೈದ್ಯರ ಸಲಹೆಯೇನು?

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ ತಿಂಗಳಲ್ಲೇ ಭಾರತದ ಹಲವು ರಾಜ್ಯಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಬಗ್ಗೆ ತೀವ್ರ ಎಚ್ಚರಿಕೆ ನೀಡಿದೆ. ಬಾಯಾರಿಕೆಯಾಗದಿದ್ದರೂ ಆಗಾಗ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಮತ್ತು ಓಆರ್‌ಎಸ್ ಬಳಸಿ ಎಂದು ಸಲಹೆ ನೀಡಲಾಗಿದೆ. ಅಷ್ಟೇ ಅಲ್ಲದೇ ಹೊರಹೋಗುವಾಗ ಛತ್ರಿ, ಟೋಪಿ ಅಥವಾ ಕನ್ನಡಕ ಬಳಸಿ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ ಎಂದು ತಿಳಿಸಲಾಗಿದೆ.

Vishakha Bhat Heggar

View all posts by this author