ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ರಾಜ್ಯದಲ್ಲಿ ಇಂದು ಸುರಿಯಲಿದೆ ಗುಡುಗು ಸಹಿತ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜತೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಇಂದು ಸುರಿಯಲಿದೆ ಗುಡುಗು ಸಹಿತ ಮಳೆ

-

Ramesh B Ramesh B Oct 17, 2025 7:00 AM

ಬೆಂಗಳೂರು, ಅ. 17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow Alert) ಘೋಷಿಸಿದೆ (Karnataka Weather). ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ.

ಶುಕ್ರವಾರ ಎಲ್ಲೆಲ್ಲಿ ಮಳೆಯಾಗಲಿದೆ?

ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ/ಗ್ರಾಮಾಂತರ) ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ತೀವ್ರ ವರ್ಷಧಾರೆ ಸುರಿಯಲಿದೆ.

ಈ ಸುದ್ದಿಯನ್ನೂ ಓದಿ: Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ‌ ಮಾಡಿದ ಆರೋಪಿ ಗುರುತು ಪತ್ತೆ

ಮೀನುಗಾರರಿಗೆ ಎಚ್ಚರಿಕೆ

ಅಕ್ಟೋಬರ್‌ 17ರಿಂದ 19ರವರೆಗೆ ಕರಾವಳಿ ಉದ್ದಕ್ಕೂ ಗಂಟೆಗೆ 35-45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಅಕ್ಟೋಬರ್‌ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಾಡಿಕೆ ಮಳೆ

ಮುಂಗಾರು ಋತುವಿನಲ್ಲಿ (ಜೂನ್‌ 1-ಸೆಪ್ಟೆಂಬರ್‌ 30) ಕರ್ನಾಟಕದಲ್ಲಿ ವಾಡಿಕೆಯಂತೆ ಮಳೆ ಸುರಿದಿದೆ. ಇನ್ನು ಅಕ್ಟೋಬರ್ ಆರಂಭದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಮಾಹಿತಿಯ ಪ್ರಕಾರ, ಅಕ್ಟೋಬರ್‌ನ ಮೊದಲ 13 ದಿನಗಳಲ್ಲಿ ರಾಜ್ಯದಲ್ಲಿ 48 ಮಿ.ಮೀ. ಮಳೆಯಾಗಿದೆ - ಈ ಅವಧಿಯಲ್ಲಿ ವಾಡಿಕೆಯ ಮಳೆ 71 ಮಿ.ಮೀ. ಶೇ. 33ರಷ್ಟು ಕೊರತೆ ಕಂಡುಬಂದಿದೆ.

ಉತ್ತರ ಒಳನಾಡಿನಲ್ಲಿ ಅಕ್ಟೋಬರ್‌ ಮಳೆಯಲ್ಲಿ ಶೇ. 69ರಷ್ಟು ಇಳಿಕೆಯಾಗಿದ್ದರೆ, ಮಲೆನಾಡಿನಲ್ಲಿ ಶೇ. 21ರಷ್ಟು ಕೊರತೆಯಾಗಿದೆ. ಕರಾವಳಿಯಲ್ಲಿ ವಾಡಿಕೆಗಿಂತ ಶೇ. 49ರಷ್ಟು ಕಡಿಮೆ ಮಳೆಯಾಗಿದೆ. ಅದಾಗ್ಯೂ ಬೆಂಗಳೂರು ಒಳಗೊಂಡಿರುವ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 22ರಷ್ಟು ಹೆಚ್ಚು ಮಳೆ ಸುರಿದಿದೆ.