Karnataka Weather: ಒಣಹವೆಯ ಮಧ್ಯೆಯೂ ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ
ಕರ್ನಾಟಕ ಹವಾಮಾನ ವರದಿ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಅದಾಗ್ಯೂ ಮಂಗಳವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ರಾಜ್ಯದಲ್ಲಿ ನಿಧಾನವಾಗಿ ಸೆಕೆಯ ವಾತಾವರಣ ಕಂಡು ಬರಲಿದೆ. ಜತೆಗೆ ರಾಜ್ಯಾದ್ಯಂತ ಬೆಳಗ್ಗೆ ಮತ್ತು ರಾತ್ರಿ ಚಳಿಯ ವಾತಾವರಣ ಇರಲಿದೆ.
                                ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ (ಸಾಂದರ್ಭಿಕ ಚಿತ್ರ). -
                                
                                Ramesh B
                            
                                Nov 4, 2025 6:00 AM
                            ಬೆಂಗಳೂರು, ನ. 4: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಅದಾಗ್ಯೂ ಮಂಗಳವಾರ (ನವೆಂಬರ್ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 19 ಡಿಗ್ರಿ ಸೆ. ಮತ್ತು 27 ಡಿಗ್ರಿ ಸೆ. ಇರಲಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ನಿಧಾನವಾಗಿ ಸೆಕೆಯ ವಾತಾವರಣ ಕಂಡು ಬರಲಿದೆ. ಜತೆಗೆ ರಾಜ್ಯಾದ್ಯಂತ ಬೆಳಗ್ಗೆ ಮತ್ತು ರಾತ್ರಿ ಚಳಿಯ ವಾತಾವರಣ ಇರಲಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂರ್ಯ ತನ್ನ ಪ್ರತಾಪ ತೋರಲಿದ್ದಾನೆ. ಮೀನಿಗಾರರಿಗೆ ಯಾವುದೇ ಮಿನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮುಂದಿನ 3 ದಿನಗಳ ಹವಾಮಾನ:
ಮುಂದಿನ 3 ದಿನಗಳವರೆಗೆ ಮೋಡ, ಸಾಪೇಕ್ಷ ಆರ್ದ್ರತೆ, ಮಳೆ, ತಾಪಮಾನ ಮತ್ತು ಗಾಳಿಯ ಧಿಕ್ಕು ಹಾಗೂ ವೇಗದಂತಹ ಗ್ರಾಮ ಪಂಚಾಯತ್ ಮಟ್ಟದ ಮುನ್ಸೂಚನೆ.
— Karnataka State Natural Disaster Monitoring Centre (@KarnatakaSNDMC) November 3, 2025
Gram Panchayat level Forecast -Cloudiness, Relative Humidity, Rainfall, Temperature & Wind speed & direction for the next 3 days. #KSNDMC pic.twitter.com/lbVqf5no5Z
ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ನಗರ/ಗ್ರಾಮಾಂತರ) ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸುರಿಯಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಲಿದೆ.
ಈ ಸುದ್ದಿಯನ್ನೂ ಓದಿ: Kasa Suriyuva Habba: ಎಲ್ಲೆಂದರಲ್ಲಿ ಕಸ ಎಸೆಯುವವರ ವಿಡಿಯೊ ಕಳುಹಿಸಿ 250 ರೂ. ಗಳಿಸಿ; BSWMLನಿಂದ ಹೊಸ ಯೋಜನೆ
ನವೆಂಬರ್ 5ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ನವೆಂಬರ್ 6ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.