Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.20: ರಾಜ್ಯದಲ್ಲಿ ತೀವ್ರ ಚಳಿ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದೆ. ವಿಜಯಪುರದಲ್ಲಿ ಶುಕ್ರವಾರದಂದು ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ 6.9 ಡಿಗ್ರಿ ಸೆ. ದಾಖಲಾಗಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಇಂದು ಕೂಡ ಶೀತ ಗಾಳಿ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿ ನಾಳೆಯೂ (ಡಿ.21) ತೀವ್ರ ಶೀತ ಗಾಳಿ (Cold Wave Alert ) ಮುಂದುವರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೆಯೇ ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ.
ಇನ್ನು ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ.
ಕೆಎಸ್‌ಎನ್‌ಡಿಎಂಸಿ ಎಕ್ಸ್ ಪೋಸ್ಟ್ ಇಲ್ಲಿದೆ
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಶೀತ #ಗಾಳಿ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
— Karnataka State Natural Disaster Monitoring Centre (@KarnatakaSNDMC) December 20, 2025
Next 5 days #coldwave #Forecast maps for the #Karnataka state with district-wise warnings. S ource:@Indiametdept @KarnatakaVarthe #KarnatakaRains pic.twitter.com/SnlZYrVpUt
ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ?
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 14°C ಇರುವ ಸಾಧ್ಯತೆ ಇದೆ.
ಒಳನಾಡಿನಲ್ಲಿ ಉಷ್ಣಾಂಶದಲ್ಲಿ 5-7 ಡಿಗ್ರಿ ಸೆ. ಇಳಿಕೆ
ಒಳನಾಡಿನ ಹಲವೆಡೆ ಶುಕ್ರವಾರ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5-7°C ರಷ್ಟು ಕಡಿಮೆಯಾಗಿತ್ತು. ದಕ್ಷಿಣ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟ ಮಂಜು ಕವಿದಿತ್ತು.
Health Tips: ಮೊಟ್ಟೆಗಳ ಸೇವನೆ ಮಿತವಾಗಿದ್ದರೆ ಸುರಕ್ಷಿತ; ತಜ್ಞರ ಕಿವಿಮಾತು ಇಲ್ಲಿದೆ
ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ನಂತರದ ದಿನಗಳಲ್ಲಿ ಕ್ರಮೇಣ 2-3°C ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.