ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರಾವಳಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಮುಂಗಾರು ಕುಂಠಿತಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಸಾಧಾರಣ ಮಳೆ, ಗುಡುಗು, ಬಿರುಗಾಳಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 20, 2026 7:00 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕುಂಠಿತಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ದಕ್ಷಿಣ (Karnataka Weather) ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಸಾಧಾರಣ ಮಳೆ, ಗುಡುಗು, ಬಿರುಗಾಳಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ, ಯಾದಗಿರಿ , ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಜೂನ್‌ 21 ರಿಂದ ಜೂನ್‌ 25 ರ ಒಳಗೆ ಕರಾವಳಿ ಭಾಗದಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ನಂತರದ ದಿನಗಳಲ್ಲಿ ಉತ್ತಮ ಮಳೆ ನಿರೀಕ್ಷೆಯಿದೆ ಎಂದು ತಿಳಿಸಿದೆ. ರಾಜ್ಯದ ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ, ಬಿರುಗಾಳಿ ಹಾಗೂ ಕೆಲವೆಡೆ ಬಿಸಿ ವಾತಾವರಣ ಇರಲಿದೆ ಎಂದು ತಿಳಿಸಿದೆ. ಜೂನ್ 21ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ಕರಾವಳಿ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಜೂನ್ 20 ರಿಂದ 21ರ ವರೆಗೆ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 21 ರಿಂದ 25ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22 & 23 ರಂದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ (64.5mm-115.5mm) ಸಾಧ್ಯತೆಯಿದೆ. IMD ಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮಳೆಗಾಲದಲ್ಲಿ ಮಕ್ಕಳ ಕ್ಷೇಮ ಕಾಯುವುದು ಹೇಗೆ?

ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಹಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ, ಜೂನ್‌ 29 ರಿಂದ ಜುಲೈ 5ರ ಅವಧಿಯಲ್ಲಿ ನೈಋುತ್ಯ ಮುಂಗಾರು ಅಸಲಿ ಬಲ ಪಡೆದುಕೊಂಡು ಪುನಶ್ಚೇನಗೊಳ್ಳುವ ಸಾಧ್ಯತೆಯಿದೆ.