ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಇಂದಿನ ಹವಾಮಾನ; ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ. ಅ.30ರಂದು ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಕುರಿತ ಹವಾಮಾನ ವರದಿ ಇಲ್ಲಿದೆ.

ಇಂದಿನ ಹವಾಮಾನ; ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

-

Prabhakara R Prabhakara R Oct 30, 2025 6:00 AM

ಬೆಂಗಳೂರು, ಅ.30: ರಾಜ್ಯದಲ್ಲಿ ಅ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಅಕ್ಟೋಬರ್ 30ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 -45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Cyclone Montha: ಮೋಂತಾ ಚಂಡಮಾರುತ ಪರಿಣಾಮ, ಬೆಂಗಳೂರಿನ ಕೆಲ ವಿಮಾನ ರದ್ದು, ರೈಲುಗಳು ವಿಳಂಬ

ಅ.31ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಹಾಗೆಯೇ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ.1ರಂದು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇರಲಿದೆ.

ಇನ್ನು ನ.2ರಿಂದ 4ವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಹಾಗೆಯೇ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ.

ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು

ಕರ್ನಾಟಕದಲ್ಲಿ ಮಂಗಳವಾರ (ಅ.28) ಅತಿ ಹೆಚ್ಚು ಗರಿಷ್ಠ ತಾಪಮಾನ 31.4°C ಹೊನ್ನಾವರದಲ್ಲಿ ದಾಖಲಾಗಿದೆ. ಹಾಗೆಯೇ ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಅತಿ ಕನಿಷ್ಠ ತಾಪಮಾನ 17.8°C ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

ಇನ್ನು ಆಂಧ್ರಪ್ರದೇಶದ ಕರಾವಳಿಯಲ್ಲಿ ಬೀಸುತ್ತಿದ್ದ 'ಮೊಂತ' ಚಂಡಮಾರುತವು 15 ಕಿ.ಮೀ ವೇಗದಲ್ಲಿ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸಿ, ಆಳವಾದ ವಾಯುವ್ಯ ದಿಕ್ಕಿಗೆ ದುರ್ಬಲಗೊಂಡು ಅಕ್ಟೋಬರ್ 29ರಂದು ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ತೆಲಂಗಾಣದ ಮೇಲೆ ಕೇಂದ್ರೀಕೃತವಾಗಿತ್ತು.

ಈ ಸುದ್ದಿಯನ್ನೂ ಓದಿ | ಮಾನ್ಸೂನ್‌, ವಿಂಟರ್‌ ಟೂರಿಸಂನಂತೆ ಸಮ್ಮರ್‌ ಟೂರಿಸಂ ಏಕಿಲ್ಲ ?

ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತವು ಬಹುತೇಕ ಸ್ಥಿರವಾಗಿತ್ತು. ಮುಂಬೈ (ಮಹಾರಾಷ್ಟ್ರ) ದಿಂದ ಪಶ್ಚಿಮ-ನೈಋತ್ಯಕ್ಕೆ ಸುಮಾರು 410 ಕಿಮೀ, ವೆರಾವಲ್ (ಗುಜರಾತ್) ನಿಂದ ನೈಋತ್ಯಕ್ಕೆ 430 ಕಿಮೀ, ಪಂಜಿಮ್ (ಗೋವಾ) ನಿಂದ ಪಶ್ಚಿಮ-ವಾಯುವ್ಯಕ್ಕೆ 560 ಕಿಮೀ, ಮಂಗಳೂರಿನ (ಕರ್ನಾಟಕ) ವಾಯುವ್ಯಕ್ಕೆ 820 ಕಿಮೀ, ಅಮಿನಿದಿವಿ (ಲಕ್ಷದ್ವೀಪ) ದಿಂದ ವಾಯುವ್ಯಕ್ಕೆ 850 ಕಿಮೀ.ದೂರದಲ್ಲಿತ್ತು, ಮುಂದಿನ 36 ಗಂಟೆಗಳಲ್ಲಿ ಇದು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.