ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಬಿರುಬಿಸಿಲಿನ ನಡುವೆ ಮತ್ತೆ ಭರ್ಜರಿ ಮಳೆಯಾಗುವ (Heavy Rain) ಮುನ್ಸೂಚನೆ ಸಿಕ್ಕಿದೆ. ಏಪ್ರಿಲ್‌ 18 ವರೆಗೆ ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (India Meteorological Department) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮಳೆಯ ಜತೆಗೆ ತೀವ್ರ ಬಿಸಿಲಿನ ಎಚ್ಚರಿಕೆಯನ್ನೂ ನೀಡಲಾಗಿದೆ.

ಏ.15 ಬುಧವಾರದಂದು ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ. ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಸಾಧಾರಣ ಅಥವಾ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಏ.16ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ.17ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ.18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

Health Tips: ಬೇಸಗೆಯಲ್ಲಿ ಮೂಗಿನಲ್ಲಿ ರಕ್ತ ಬರುವುದೇಕೆ? ಇದಕ್ಕೇನು ಪರಿಹಾರ?

ತಾಪಮಾನ ಎಚ್ಚರಿಕೆ:

ಏಪ್ರಿಲ್ 18 ರವರೆಗೆ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಮತ್ತು ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ/ ಬಿಸಿಗಾಳಿ ವಾತಾವರಣ ಇರುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ತಾಪಮಾನದಲ್ಲಿ ಕ್ರಮೇಣ ಏರಿಕೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.