ರಾಜ್ಯದಲ್ಲಿ ದುರ್ಬಲವಾದ ಮುಂಗಾರು; ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ
Karnataka Weather: ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದ್ದು, . ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಿದೆ. ಒಳನಾಡಿನಲ್ಲಿಯೂ ಮಳೆಯ ಕೊರತೆ ಕಂಡು ಬಂದಿದೆ. ರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದ್ದು, . ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಿದೆ. ಒಳನಾಡಿನಲ್ಲಿಯೂ ಮಳೆಯ (Karnataka Weather) ಕೊರತೆ ಕಂಡು ಬಂದಿದೆ. ರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರ ಮಳೆಯಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರವಾದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ನಾಳೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಹಿಮಾಚಲ ಪ್ರದೇಶದಲ್ಲಿ ಅಬ್ಬರಿಸಿದ ಮಳೆ-ಗಾಳಿ: ಒಂದೇ ತಿಂಗಳಲ್ಲಿ 157 ಮಂದಿ ಸಾವು, 260 ರಸ್ತೆ ಸಂಪರ್ಕ ಕಡಿತ
ಕರಾವಳಿಯ ಮೂರು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಬಹುದು. ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದೆ.