ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ? ಯಾವ ಜಿಲ್ಲೆಯಲ್ಲಿ ಭಾರಿ ಮಳೆ

Karnataka Weather: ರಾಜ್ಯದಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆಯಾಗುವ ( Rain) ಸಾಧ್ಯತೆ ಹೆಚ್ಚಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 28, 2026 7:07 AM

ಬೆಂಗಳೂರು: ರಾಜ್ಯದಲ್ಲಿ (Karnataka Weather) ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆಯಾಗುವ ( Rain) ಸಾಧ್ಯತೆ ಹೆಚ್ಚಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡು ಕರ್ನಾಟಕದಲ್ಲಿ ಚದುರಿದ ಹಾಗೂ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ಇದೆ. ಜುಲೈ 29 ರಿಂದ ಆಗಸ್ಟ್‌ 1 ರವರೆಗೂ ರಾಜ್ಯದಾದ್ಯಂತ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿಯಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಇಂದು ರಾಜ್ಯದ ಹವಾಮಾನ ಹೇಗಿರಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಸಣ್ಣ ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.