ಬೆಂಗಳೂರು: ಜೂನ್‌ನಲ್ಲಿ ದುರ್ಬಲಗೊಂಡಿದ್ದ ಮುಂಗಾರು ಜುಲೈನಲ್ಲಿ ಆರ್ಭಟಿಸಿತ್ತು, ಆದರೆ ಇದೀಗ ಮತ್ತ ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather) ಹೇಳಿದೆ. ಕರಾವಳಿ ಭಾಗದಲ್ಲಿ ಕಳೆದ ವಾರವರೆಲ್ಲ ಭಾರಿ ಗಾಳಿ-ಮಳೆ ಆಗುತ್ತಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 17ರವರೆಗೂ ಸಾಧಾರಣ ಮಳೆಯಾಗಲಿದೆ. ಗಾಳಿಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 12ರವರೆಗೆ ಸಾಧಾರಣ ಮಳೆಯಾಗಲಿದ್ದು, ಜುಲೈ 13ರಿಂದ 15ರವರೆಗೆ ಒಣಹವೆ ಇರಲಿದೆ. ಜುಲೈ 16 ಮತ್ತು 17ರಂದು ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉಳಿದ ಭಾಗದಲ್ಲಿ ಒಣಹವೆಯೇ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜುಲೈ 17ರವರೆಗೆ ಸಾಧಾರಣೆ ಮಳೆಯಾಗಲಿದೆ. ಇನ್ನುಳಿದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತಿತರ ಜಿಲ್ಲೆಗಳಲ್ಲಿ ವಾರಪೂರ್ತಿ ಮಳೆಯಿಲ್ಲ. ಮಳೆಯಾದರೂ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು IMD ತಿಳಿಸಿದೆ.
ಜೂನ್ ತಿಂಗಳಲ್ಲಿ ವಾಡಿಕೆಗಿಂತಲೂ ಮಳೆ ಕಡಿಮೆಯಾಗಿತ್ತು. ಜುಲೈನಲ್ಲಿ ಕೂಡ ವಾಡಿಕೆಗಿಂತಲೂ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.ಜೂನ್ ತಿಂಗಳಲ್ಲಿ ವಾಡಿಕೆಗಿಂತಲೂ ಮಳೆ ಕಡಿಮೆಯಾಗಿತ್ತು. ಜುಲೈನಲ್ಲಿ ಕೂಡ ವಾಡಿಕೆಗಿಂತಲೂ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೇವಲ ಮಳೆ ಮಾತ್ರವಲ್ಲ, ಗಂಟೆಗೆ ಬರೋಬ್ಬರಿ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡದಲ್ಲಿ ಹಲವು ಪ್ರದೇಶಗಳಲ್ಲಿ ಅಂದರೆ 75% ದಷ್ಟು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ 25 % ಕ್ಕಿಂತ ಕಡಿಮೆ ಪ್ರದೇಶದಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.