ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರಾವಳಿ- ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ?

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಹಾಗೂ ಗುಡುಗು ಸಂಭವಿಸುವ ಸಾಧ್ಯತೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ಇದೆ.

ಇಂಟರ್ ನೆಟ್ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಹಾಗೂ ಗುಡುಗು (Karnataka Weather) ಸಂಭವಿಸುವ ಸಾಧ್ಯತೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು-ಮಿಂಚು ಹಾಗೂ ಗಂಟೆಗೆ 40–50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಕೋಲಾರ, ವಿಜಯನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದ ಮಳೆಯ ಎಚ್ಚರಿಕೆ ಇಲ್ಲ. ಆದರೆ ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಇಂದು ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ ಸುಮಾರು 30–40 ಕಿ.ಮೀ ಇರಬಹುದು ಎಂದು IMD ತಿಳಿಸಿದೆ.

ಕರಾವಳಿ ಕರ್ನಾಟಕದಲ್ಲಿ ಇಂದು ವ್ಯಾಪಕ ಭಾರಿ ಮಳೆಯ ಮುನ್ಸೂಚನೆ ಇಲ್ಲ. ದಕ್ಷಿಣ ಕನ್ನಡದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದ ನಡುವೆ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯ ಮುನ್ಸೂಚನೆಯನ್ನು IMD ನೀಡಿದೆ.

Vishakha Bhat Heggar

View all posts by this author