Karnataka weather: ಹವಾಮಾನ ವರದಿ: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
Weather Report: ರಾಜ್ಯದಲ್ಲಿ ಮುಂಗಾರಿನಲ್ಲಿ ಮಳೆಯ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮಳೆಯ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಸ್ಥಿತಿ ನಿರ್ಮಾಣವಾಗಿದೆ. I ಈ ನಡುವೆ ವಿವಿಧ ಜಿಲ್ಲೆಗಳಿಗೆ ಇಂದು ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
-
ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ಜು.21) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather) ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆ ಇದೆ.
ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಜುಲೈ 22ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 23ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕಡೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.