ತಾಪಮಾನ ಏರಿಕೆ ನಡುವೆ ಬೆಂಗಳೂರಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಇಂದು ಕೆಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸಂಗ್ರಹ ಚಿತ್ರ -
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೆಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ ಸುಮಾರು 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ.
ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ 32°C ನಿಂದ 34°C ವರೆಗೆ ದಾಖಲಾಗಬಹುದು. ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಸಂದರ್ಭ ಗಾಳಿಯ ವೇಗ 30–40 ಕಿ.ಮೀ. ತಲುಪುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ ಸುಮಾರು 32°C, ಕನಿಷ್ಠ ತಾಪಮಾನ 21°C ಇರುವ ನಿರೀಕ್ಷೆಯಿದೆ.
ಕರಾವಳಿ- ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ?
ಮಂಗಳವಾರ ಸಂಜೆ ಬೆಂಗಳೂರಿನ ಹಲವು ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದ್ದು, ಕೆಲವು ರಸ್ತೆಗಳು ಜಲಾವೃತವಾಗಿ ಸಂಚಾರಕ್ಕೂ ತೊಂದರೆಯಾಗಿತ್ತು. ಮುಂದಿನ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಳೆಯಾಗಿದೆ. ಪ್ರಮುಖವಾಗಿ, ಮೆಜೆಸ್ಟಿಕ್, ಗಾಂಧಿ ನಗರ, ಕಬ್ಬನ್ ರಸ್ತೆ, ವಿಧಾನಸೌಧ, ಹಲಸೂರು, ಎಂಜಿ ರಸ್ತೆ, ಶಿವಾಜಿನಗರ, ಹೆಬ್ಬಾಳ, ವಿಮಾನ ನಿಲ್ದಾಣ ರಸ್ತೆ, ಆರ್‌ಟಿ ನಗರ, ಮಲ್ಲೇಶ್ವರ ಸೇರಿದಂತೆದಲ್ಲಿ ಹಲವು ಪ್ರದೇಶಗಳಲ್ಲಿ ಜೋರಾಗಿ ಸುರಿದಿದೆ.
ಅ