ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಕೊರತೆ ಉಂಟಾಗಿದ್ದು, ಕರಾವಳಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ ಸೇರಿ ಕೆಲವು ಕಡೆ ಮಾತ್ರ ಉತ್ತಮ (Karnataka Weather) ಮಳೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಜೂನ್ ಕೊನೆಯ ಎರಡು ವಾರವೂ ಒಣ ಹವೆಯ ಮುನ್ಸೂಚನೆ ಕೊಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಜುಲೈ 3 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್, ಹಾಸನ, ಚಿಕ್ಕಮಂಗಳೂರು, ಶಿವಮೊಗ್ಗ,ಧಾರವಾಡ , ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಗುರದಿಂದ ಸಾಧಾರಣ ಮಳೆ ಜುಲೈ 2 ರಿಂದ 8 ರವರೆಗೆ ಬಾಗಲಕೋಟೆ, ಬೀದರ್, ಹಾವೇರಿ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ, ಬೆಂಗಳೂರು ನಗರ, ಬಳ್ಳಾರಿ, ಬೆಂ. ಗ್ರಾಮಾಂತರ , ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಜುಲೈ 4ರ ವರೆಗೆ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಜುಲೈ 5 ರಿಂದ ಜುಲೈ 8ರ ವರೆಗೆ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದ್ದು, ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿಯೂ ಮೋಡ ಕವಿದ ವಾತಾವರಣ ಇದೆ. ಗರಿಷ್ಠ ತಾಪಮಾನ 29 ಡಿ. ಸೆಲ್ಸಿಯಸ್ ಗೆ ಇಳಿದಿದೆ. ಕನಿಷ್ಠ ತಾಪಮಾನ 21 ಡಿಗ್ರಿ ಸೆ.ಇದೆ.
ಮುಂಬೈ ಭಾರೀ ಮಳೆಗೆ ಜನರು ತತ್ತರ: ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ವ್ಯಕ್ತಿ ದುರ್ಮರಣ
ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 8ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.