ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Weather: ಇಂದು ಕರಾವಳಿ ಸಹಿತ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಬುಧವಾರ, ಗುರುವಾರ ಸುರಿದ ಮಳೆ ಇಂದು ಕೂಡ ರಾಜ್ಯದ ವಿವಿಧ ಭಾಗಗಳಲಲಿ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಇಂದು ಕರಾವಳಿ ಸಹಿತ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

-

Ramesh Ballamoole
Ramesh Ballamoole Sep 18, 2025 2:02 PM

ಬೆಂಗಳೂರು: ಕೆಲವು ದಿನಗಳ ಬಿಡುವಿನ ಬಳಿಕ ಮಳೆ ರಾಜ್ಯದಲ್ಲಿ ಮತ್ತೆ ಅಬ್ಬರಿಸತೊಡಗಿದೆ. ಬುಧವಾರ, ಗುರುವಾರ ಸುರಿದ ಮಳೆ ಇಂದು (ಸೆಪ್ಟೆಂಬರ್‌ 19) ಕೂಡ ಮುಂದುವರಿಯಲಿದೆ. ಕರಾವಳಿ ಸಹಿತ ವಿವಿಧ ಕಡೆಗಳಲ್ಲಿ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ (Karnataka Weather). ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21°C ಮತ್ತು 28°C ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆಯೂ ಸಾಧಾರಣ ಮಳೆ ಸುರಿಯಲಿದೆ.

ಈ ಸುದ್ದಿಯನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್‌, ಭದ್ರಾವತಿ ವ್ಯಕ್ತಿ ಮೇಲೆ ದೂರು

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹಲವೆಡೆ ಹಗುರ ವರ್ಷಧಾರೆಯಾಗಲಿದೆ. ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆ ನೀಡಿಲ್ಲ.

ಸೆ. 20 ಮತ್ತು 21ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.