ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಹೆಚ್ಚಿದೆ. ಹವಾಮಾನ ಮುನ್ಸೂಚನೆ (IMD) ಪ್ರಕಾರ ನಾಳೆ ಹಾಗೂ ನಾಡಿದ್ದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 23 ಮತ್ತು 24ರಂದು ಕರಾವಳಿ ಕರ್ನಾಟಕದಲ್ಲಿ ಮಳೆಯಾಗಲಿದೆ.

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ;  6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 23, 2026 8:12 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಹೆಚ್ಚಿದೆ. ಹವಾಮಾನ ಮುನ್ಸೂಚನೆ (IMD) ಪ್ರಕಾರ ನಾಳೆ ಹಾಗೂ ನಾಡಿದ್ದು (Karnataka Weather) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 23 ಮತ್ತು 24ರಂದು ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶದಲ್ಲಿ ಅಬ್ಬರಿಸಿದ ಮಳೆ-ಗಾಳಿ: ಒಂದೇ ತಿಂಗಳಲ್ಲಿ 157 ಮಂದಿ ಸಾವು, 260 ರಸ್ತೆ ಸಂಪರ್ಕ ಕಡಿತ

ಬೆಂಗ‌ಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಸತತ ಗಾಳಿ ಬೀಸಲಿದ್ದು, ಹಲವೆಡೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 23 ಮತ್ತು 24ರಂದು ಕರಾವಳಿಯ ಪ್ರತ್ಯೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಆಗಸ್ಟ್25ರ ವರೆಗೆ ಕರಾವಳಿ ಕರ್ನಾಟಕದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.