ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಮುರಸು ಚಂಡಮಾರುತದ ತೀವ್ರ ಪ್ರಭಾವದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ನವೆಂಬರ್ 6) ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಮುರಸು ಚಂಡಮಾರುತದ ತೀವ್ರ ಪ್ರಭಾವದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ (Karnataka Weather) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ನವೆಂಬರ್ 6) ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 7ರ ವರೆಗೆ ರಾಜ್ಯದಾದ್ಯಂತ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂತಾದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹಾಗೂ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಬರದ ಆತಂಕದ ನಡುವೆ ಹಾವೇರಿಗೆ ಮಳೆರಾಯನ ಸಿಂಚನ; ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಗುಡುಗು ಸಹಿತ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹವಾಮಾನ ಸಂಪೂರ್ಣ ಏರುಪೇರಾಗಿದೆ. ಇಂದು (ನವೆಂಬರ್ 6) ನಗರದಾದ್ಯಂತ ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಇಂದು ಕನಿಷ್ಠ ತಾಪಮಾನ 19.5°C ಗೆ ಕುಸಿದಿದ್ದು, ಗರಿಷ್ಠ ತಾಪಮಾನ 26.6°C ಆಸುಪಾಸಿನಲ್ಲಿ ಇರಲಿದೆ.

Vishakha Bhat Heggar

View all posts by this author