ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ನವೆಂಬರ್ 7ರ ಇಂದಿನ ಮುನ್ಸೂಚನೆಯ ಪ್ರಕಾರ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ (Karnataka Weather) ಮಳೆಯ ತೀವ್ರತೆ ಹೆಚ್ಚಿರಲಿದ್ದು, ಉತ್ತರದಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ದಟ್ಟ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ ಹಾಗೂ ವಿಜಯಪುರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ದಿನವಿಡೀ ಒಣಹವೆ ಮತ್ತು ಬಿಸಿಲಿನ ವಾತಾವರಣ ಇರಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಳೆ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯ ತೀವ್ರತೆ ಇಂದು ಇರುವುದಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಇಂದು ಭಾರಿ ಮಳೆಯಾಗಿದ್ದರೂ, ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಎಲ್ ನಿನೋ ಪರಿಣಾಮ; ತಾಪಮಾನ ಇನ್ನಷ್ಟು ಹೆಚ್ಚಳ: ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
ಬೆಳಗಿನ ಜಾವದ ಅವಧಿಯಲ್ಲಿ ತಾಪಮಾನವು 19°C ಗೆ ಇಳಿಯುವುದರಿಂದ ರಾಜ್ಯದಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಲಿದೆ. ಜೊತೆಗೆ ಮುಂಜಾನೆ ಮಂಜು ಮುಸುಕುವ ಸಾಧ್ಯತೆಯೂ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ. ಹಗಲಿನಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದು.