Karnataka Rains: ಯೆಲ್ಲೋ ಅಲರ್ಟ್; ಮುಂದಿನ 2 ದಿನ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ
Latest Kannada News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

-

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ (Karnataka Rains) ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.
ಸೆ. 15ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸೆ. 16ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/4menAl0V2c
— Karnataka State Natural Disaster Monitoring Centre (@KarnatakaSNDMC) September 14, 2025
ಸೆ.17ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸೆ.18ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Solar Eclipse: ಸೆ. 21ರಂದು ಸೂರ್ಯಗ್ರಹಣ: ಈ ರಾಶಿಯವರು ಜಾಗರೂಕರಾಗಿರಿ
ಸೆ. 19 ಮತ್ತು 20ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.