Karnataka Weather: ಇಂದು ಬೆಂಗಳೂರು, ಕರಾವಳಿ ಸೇರಿ ವಿವಿಧೆಡೆ ಸುರಿಯಲಿದೆ ಮಳೆ; ನಿಮ್ಮೂರಿನ ಹವಾಮಾನ ಹೇಗಿರಲಿದೆ?
Karnataka Weather Today: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದ್ದು, ಶುಕ್ರವಾರವೂ ವಿವಿಧೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 30 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಜು. 24: ಕೆಲವು ದಿನಗಳ ಬಿಡುವಿನ ಬಳಿಕ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಬೆಂಗಳೂರು, ಕರಾವಳಿ ಸೇರಿ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದ್ದು, ಶುಕ್ರವಾರವೂ (ಜುಲೈ 24) ವಿವಿಧೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ (Karnataka Weather). ಬೆಂಗಳೂರಿನಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜತೆಗೆ ಸಾಧಾರಣ ಮಳೆ ಸುರಿಯಲಿದ್ದು, ಕರಾವಳಿಯಲ್ಲಿಯೂ ಮಳೆಯಾಗಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 30 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಮಳೆ ಸುರಿಯಲಿದೆ. ಇನ್ನು ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
178 ತಾಲೂಕುಗಳಲ್ಲಿ ಮಳೆ ಕೊರತೆ; ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಡಿಸಿ-ಸಿಇಒಗಳಿಗೆ ಸಿಎಂ ಸೂಚನೆ
ಮುಂದಿನ ದಿನಗಳ ಹವಾಮಾನ ವಿವರ
ಜುಲೈ 25ರಂದೂ ಕರಾವಳಿಯ ವಿವಿಧ ಕಡೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆ ಸುರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಗಾಳಿಯಿಂದಿಗೆ ಮಳೆಯಾಗಲಿದೆ.
ದಾಖಲೆ ಬರೆಯಲಿರುವ ಎಲ್ ನಿನೋ? ಭಾರತದಲ್ಲಿ ಮಳೆ ಕೊರತೆ ಹೆಚ್ಚುವ ಸಾಧ್ಯತೆ
ರಾಜ್ಯದಲ್ಲಿ ಶೇಕಡಾ 60ರಷ್ಟು ಮುಂಗಾರು ಕೊರತೆ
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ಭೀಕರ ಬರಗಾಲ ಎದುರಾಗಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು ಶೇಕಡಾ 60ರಷ್ಟು ಮಳೆ ಕಡಿಮೆಯಾಗಿದೆ. ಒಟ್ಟು 178 ತಾಲೂಕುಗಳಲ್ಲಿ ಮಳೆಯ ತೀವ್ರ ಕೊರತೆ ಕಾಣಿಸಿಕೊಂಡಿದ್ದರೆ, 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇಕಡಾ 40ರಷ್ಟು ಮಾತ್ರ ನೀರು ಸಂಗ್ರಹವಿದೆ ಎಂಬ ಆತಂಕದ ಅಂಕಿ-ಅಂಶ ಹೊರ ಬಿದ್ದಿದೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.