ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ; ಉತ್ತರ ಒಳನಾಡಿನಲ್ಲಿ ಮುಂದುವರಿದ ಬಿಸಿಲು

Karnataka Weather: ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಆಳವಾದ ವಾಯುಭಾರ ಕುಸಿತದಿಂದಾಗಿ ಕರಾವಳಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಅಕ್ಟೋಬರ್ 27ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆಯಿದೆ.

ಬಂಗಾಳ ಕೊಲ್ಲಿಯಲ್ಲಿ ‘ಅರ್ನಾಬ್’ ಚಂಡಮಾರುತ ಅಬ್ಬರ: ಒಡಿಶಾ, ಆಂಧ್ರ ಹಾಗೂ ತಮಿಳುನಾಡಿಗೆ ತೀವ್ರ ಮುನ್ನೆಚ್ಚರಿಕೆ, ಶಾಲಾ-ಕಾಲೇಜುಗಳು ಬಂದ್

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ. ಗರಿಷ್ಠ ತಾಪಮಾನ 32°C ಹಾಗೂ ಕನಿಷ್ಠ ತಾಪಮಾನ 26°C ಆಸುಪಾಸಿನಲ್ಲಿ ದಾಖಲಾಗಲಿದೆ. ಮಳೆಯ ಮುನ್ಸೂಚನೆ ಕೇವಲ 10% ರಷ್ಟಿದ್ದು, ದಿನದ ಬಹುಪಾಲು ಒಣ ಹವೆ ಮುಂದುವರಿಯಲಿದೆ.

Vishakha Bhat Heggar

View all posts by this author