ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ; ಕರಾವಳಿಯಲ್ಲಿಯೂ ಮುಂಗಾರು ದುರ್ಬಲ

Karnataka weather: ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಪ್ರತಿವರ್ಷಕ್ಕಿಂತ ಈ ವರ್ಷ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆ ಎದರುರಾಗಿದೆ. ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಪ್ರತಿವರ್ಷಕ್ಕಿಂತ ಈ ವರ್ಷ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ (Karnataka weather) ಕೊರತೆ ಎದರುರಾಗಿದೆ. ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ವಿಜಯನಗರದಲ್ಲಿ ಶೇ.58 ಮತ್ತು ಮೈಸೂರಿನಲ್ಲಿ ಶೇ.51ರಷ್ಟು ಮಳೆ ಕೊರತೆ ದಾಖಲಾಗಿದೆ. ಚಾಮರಾಜನಗರದಲ್ಲಿ ಶೇ.47, ಕೋಲಾರದಲ್ಲಿ ಶೇ.42 ಹಾಗೂ ಬಳ್ಳಾರಿಯಲ್ಲಿ ಶೇ.41ರಷ್ಟು ಮಳೆ ಕೊರತೆ ಎದುರಾಗಿದೆ.

ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ 30–40 ಕಿ.ಮೀ ವೇಗದ ಗಾಳಿಯೂ ಬೀಸಬಹುದು.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಅನೇಕ ಭಾಗಗಳಲ್ಲಿ ನಿರಂತರ ಗಾಳಿ ಬೀಸಲಿದ್ದು, ಮಳೆಯ ಪ್ರಮಾಣ ಕಡಿಮೆಯೇ ಇರಲಿದೆ ಎಂದು IMD ಮುನ್ಸೂಚನೆ ನೀಡಿದೆ. ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಯೆಲ್ಲೋ, ಆರೆಂಜ್‌ ಅಲರ್ಟ್‌ಗಳು ಇಲ್ಲ.

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ದಾಖಲಾಗಿದೆ.

Vishakha Bhat Heggar

View all posts by this author