ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲವಾಗಿದ್ದರೂ, ಇಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಒಣಹವೆ ಇರಲಿದೆ ಎಂದು IMD ಮುನ್ಸೂಚನೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನ ಮಳೆಯ ಚಟುವಟಿಕೆ ಕಡಿಮೆಯಾಗಲಿದೆ.
ಇಂಟರ್ ನೆಟ್ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲವಾಗಿದ್ದರೂ, ಇಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ (Karnataka Weather) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದಲ್ಲಿ ಬಹುತೇಕ ಒಣಹವೆ ಇರಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಬಹುದು.
ಇಂದು ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯ ನಿರೀಕ್ಷೆಯಿದ್ದು, ಗರಿಷ್ಠ ತಾಪಮಾನ ಸುಮಾರು 30–31°C ಮತ್ತು ಕನಿಷ್ಠ 20–21°C ಇರಬಹುದು. ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉಳಿದ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮೋಡ-ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಒಣಹವೆ ಇರಲಿದೆ ಎಂದು IMD ಮುನ್ಸೂಚನೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನ ಮಳೆಯ ಚಟುವಟಿಕೆ ಕಡಿಮೆಯಾಗಲಿದೆ. ಸೆಪ್ಟೆಂಬರ್ 13ರಂದು ಕೂಡ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಹಗುರ ಮಳೆ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಸೆಪ್ಟೆಂಬರ್ 14ರಿಂದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದಲ್ಲಿ ತಗ್ಗಿದ ಮಳೆ ಪ್ರಭಾವ; ಜಿಲ್ಲೆಗಳ ಹವಾಮಾನ ವರದಿ ಹೇಗಿದೆ?
ಮಳೆ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಸುಮಾರು 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಭಾಗಶಃ ಮೋಡ ಕವಿದ ವಾತಾವರಣ ಇದೆ.