ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆ ಮುನ್ಸೂಚನೆ; 25 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌

Karnataka Weather: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇಂದು ಕೊಂಚ ನೆಮ್ಮದಿ ಸಿಗಲಿದೆ. ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹವಾಮಾನ ಇಲಾಖೆ ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆ ಮುನ್ಸೂಚನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 29, 2026 9:01 AM

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇಂದು ಕೊಂಚ ನೆಮ್ಮದಿ ಸಿಗಲಿದೆ. ರಾಜ್ಯದ ಹಲವು ಕಡೆ ಗುಡುಗು ಸಹಿತ (Karnataka Weather) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹವಾಮಾನ ಇಲಾಖೆ ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್​ ಇತ್ತು.

ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಬಿಸಿ ಬಿಸಿಯಾಗಿದ್ದ ಕಡಲ ನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.ಮಲೆನಾಡಿನಲ್ಲಿ ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಗಡಿ ಪ್ರದೇಶಗಳಲ್ಲೂ ಸಂಜೆ ಗುಡುಗು ಮಳೆ ಸಾಧ್ಯತೆ ಇದೆ.

ಉಳಿದ ಭಾಗಗಳಲ್ಲೂ ಚದುರಿದ ಮಳೆ ಬೀಳುವ ಲಕ್ಷಣವಿದ್ದು, ಏಪ್ರಿಲ್ 29ರಿಂದ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

Karnataka Weather: ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಹಾಗೂ 30-40 ಕಿ.ಮೀ ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ.