ಇಂದಿನಿಂದ ಏ. 7 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
Rain Alert: ಇಂದಿನಿಂದ ಎಪ್ರಿಲ್ 7 ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಇಂದಿನಿಂದ ಎಪ್ರಿಲ್ 7 ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. (Karnataka Weather) ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆಯಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ರಾಜ್ಯದಲ್ಲೇ ಗರಿಷ್ಠ ತಾಪಮಾನ ಯಾದಗಿರಿಯಲ್ಲಿ ದಾಖಲಾಗುವ ನಿರೀಕ್ಷೆಯಿದ್ದು, ಇಲ್ಲಿ 37 ಡಿಗ್ರಿ ಸೆಲ್ಸಿಯಸ್ ವರೆಗೆ ಬಿಸಿಲು ಇರಲಿದೆ. ಬಳ್ಳಾರಿ, ಕಲಬುರಗಿ ಮತ್ತು ಬಾಗಲಕೋಟೆಯಲ್ಲೂ ಕೂಡ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದೆ.
Karnataka weather: ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೂ ಗಾಳಿ-ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಭೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.