ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಇಂದು ಸಂಜೆ ಗುಡುಗು ಸಹಿತ ಬಿರುಗಾಳಿ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Karnataka Weather: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯದಲ್ಲಿ (Karnataka Weather) ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಕೆಲವು ದಿನ ಇದೇ ವಾತಾವರಣ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ತೀವ್ರಗೊಂಡಿದ್ದು, ಇಂದು ಕೆಲವು ಕಡೆಗಳಲ್ಲಿ ಗುಡುಗು ಸಹಿತ ತೀವ್ರ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಇಂದು ಹವಾಮಾನ ವೈಪರೀತ್ಯದಿಂದಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಉಳಿದಂತೆ ಬಹುತೇಕ ಭಾಗಗಳಲ್ಲಿ ಮೋಡ ಕವಿದ ಅಥವಾ ಸಾಧಾರಣ ಮಳೆಯ ವಾತಾವರಣವಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ 90% ಸಾಧ್ಯತೆ ಇದೆ.

ಬೆಂಗಳೂರು ಹವಾಮಾನಕ್ಕೆ ಫಿದಾ: ಸ್ವಂತ ಊರಿಗೆ ಹೋದರೂ ಕಾಡುತ್ತಿದೆ ಎಂದು ಭಾವನಾತ್ಮಕ ಪೋಸ್ಟ್‌ ಶೇರ್ ಮಾಡಿದ ಯುವತಿ!

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Vishakha Bhat Heggar

View all posts by this author